ರಾಜ್ಯ

ಬಾಂಬ್‌ ಸ್ಫೋಟ ಪ್ರಕರಣವನ್ನು ಸಮರ್ಥಿಸಿಕೊಳ್ಳುವುದು ಅಪರಾಧ: ಸಂಸದೆ ಸುಮಲತಾ

ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್‌ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್‌ ಬ್ಲಾಸ್ಟ್‌ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಲ್‌ಎಸ್‌ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಿಜೆಪಿಯಿಂದ ಲೋಕ ಟಿಕೆಟ್‌ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್‌ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್‌ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.

ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್‌ ಹಾಗೂ ಯಶ್‌ ಕ್ಯಾಂಪೆನ್‌ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್‌ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.

ಯಶ್‌ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.

andolana

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

10 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

12 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

12 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

12 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

14 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

15 hours ago