Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ರಾಜ್ಯ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದ್ದು, ಬಿಎಸ್‌ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿಕೆ ಮಾಡಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಮಾರ್ಚ್‌ 14ರಂದು ಪೊಕ್ಸೋ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಬಿಎಸ್‌ವೈ ಎರಡು ಪ್ರತ್ಯೇಕ ರಿಟ್‌ ಅರ್ಜಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ಕೋರ್ಟ್‌ ಬಿಎಸ್‌ವೈ ಬಂಧಿಸದಂತೆ ಆದೇಶ ನೀಡಿ, ವಿಚಾರಣೆ ಮುಂದೂಡಿತ್ತು.

ಇಂದಿನ ಹೈಕೋರ್ಟ್‌ ವಿಚಾರಣೆಯಲ್ಲಿ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲದ ಸಿ.ವಿ ನಾಗೇಶ್‌ ಮಂತ್ರಿಗಳು ತಪ್ಪು ತಪ್ಪಾಗಿ ಪೋಕ್ಸೋ ಪೋಕ್ಸೋ ಎನ್ನುತ್ತಿದ್ದಾರೆ. ಬರಲಿ, ವಾದ ಮಂಡನೆ ಮಾಡಿಬಿಡೋಣ ಎಂದು ಸವಾಲು ಹಾಕಿದರು. ಇದೇ ವೇಳೇ ನಾವು ಸಿದ್ಧರಿದ್ದೇವೆ ಸ್ವಲ್ವ ಸಮಯಬೇಕು ಎಂದು ಎಸ್‌ಪಿಪಿ ಅಶೋಕ್‌ ನಾಯ್ಕ್‌ ಹೇಳಿದರು. ಇದೆಲ್ಲಾ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದ್ದು, ಜೊತೆಗೆ ಬಿಎಸ್‌ವೈ ಬಂಧಿಸದಂತೆ ನೀಡಿದ್ದ ಮಂಧ್ಯಂತರ ಆದೇಶವನ್ನು ಮುಂದುವರಿಸಿತು.

Tags: