ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ರಾಜ್ಯ ಹೈಕೋರ್ಟ್ ತಾತ್ಕಲಿಕ ರಿಲೀಫ್ ನೀಡಿದ್ದು, ಬಿಎಸ್‌ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿಕೆ ಮಾಡಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾರ್ಚ್ 14ರಂದು ಪೊಕ್ಸೋ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಬಿಎಸ್‌ವೈ ಎರಡು ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ಕೋರ್ಟ್ ಬಿಎಸ್‌ವೈ ಬಂಧಿಸದಂತೆ ಆದೇಶ ನೀಡಿ, ವಿಚಾರಣೆ ಮುಂದೂಡಿತ್ತು.
ಇಂದಿನ ಹೈಕೋರ್ಟ್ ವಿಚಾರಣೆಯಲ್ಲಿ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲದ ಸಿ.ವಿ ನಾಗೇಶ್ ಮಂತ್ರಿಗಳು ತಪ್ಪು ತಪ್ಪಾಗಿ ಪೋಕ್ಸೋ ಪೋಕ್ಸೋ ಎನ್ನುತ್ತಿದ್ದಾರೆ. ಬರಲಿ, ವಾದ ಮಂಡನೆ ಮಾಡಿಬಿಡೋಣ ಎಂದು ಸವಾಲು ಹಾಕಿದರು. ಇದೇ ವೇಳೇ ನಾವು ಸಿದ್ಧರಿದ್ದೇವೆ ಸ್ವಲ್ವ ಸಮಯಬೇಕು ಎಂದು ಎಸ್‌ಪಿಪಿ ಅಶೋಕ್ ನಾಯ್ಕ್ ಹೇಳಿದರು. ಇದೆಲ್ಲಾ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದ್ದು, ಜೊತೆಗೆ ಬಿಎಸ್‌ವೈ ಬಂಧಿಸದಂತೆ ನೀಡಿದ್ದ ಮಂಧ್ಯಂತರ ಆದೇಶವನ್ನು ಮುಂದುವರಿಸಿತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…