Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್:‌ ಇಂದು ಮಧ್ಯಾಹ್ನ ತೀರ್ಪು ಪ್ರಕಟ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್‌ ಆದೇಶ ಹೊರಡಿಸಲಿದೆ.

ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ.

ಎ1 ಮುರುಘಾ ಶರಣರು, ಎ2 ವಾರ್ಡನ್‌ ರಶ್ಮಿ, ಎ5 ಮಠದ ಮ್ಯಾನೇಜರ್‌ ಪರಮಶಿವಯ್ಯ ಇಂದು ಕೋರ್ಟ್‌ಗೆ ಹಾಜರಾಗಿದ್ದು, ಆರೋಪಿತರಲ್ಲಿ ಎ3 ಬಸವಾದಿತ್ಯ ಹಾಗೂ ಎ5 ವಕೀಲ ಗಂಗಾಧರಯ್ಯ ಅವರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿದೆ.

Tags:
error: Content is protected !!