Mysore
21
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.

ಇನ್ನೂ ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿ ಆದೇಶಿಸಿತು.

ಪ್ರಕರಣ ಹಿನ್ನೆಲೆ ಏನು?

ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಸಿಐಡಿ ಒಂದಷ್ಟು ಸಾಕ್ಷ್ಯ ಕಲೆ ಹಾಕಿದೆ. ದೂರುದಾರೆ ನೀಡಿದ್ದ ವಿಡಿಯೋ ಪಡೆದು ಪರಿಶೀಲನೆ ಜೊತೆಗೆ ಬಾಲಕಿ, ಬಿಎಸ್‍ವೈ ಧ್ವನಿ ಸಂಗ್ರಹ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದೆ.

ಈ ಎಲ್ಲಾ ಬೆಳವಣಿಗೆಯ ನಡುವೆ ತಮ್ಮ ಮೇಲಿನ ಆರೋಪ ನಿರಾಧಾರವಾದದ್ದು, ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ರದ್ದುಗೊಳಿಸಬೇಕು ಎಂದು ಬಿಎಸ್‍ವೈ ನ್ಯಾಯಾಲಯದ ಮೊರೆ ಹೋಗಿದ್ದರು.

Tags:
error: Content is protected !!