ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಖುದ್ದು ಮಾರ್ಚ್.15 ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೋಟಿಸ್ ನೀಡಿದೆ.
ಬಿಎಸ್‌ವೈ ವಿರುದ್ಧದ ಪೊಕ್ಸೋ ಪ್ರಕರಣ ವಿಚಾರದಲ್ಲಿ ಇತ್ತೀಚೆಗೆ ಹೈಕೋರ್ಟ್‌ನ ಧಾರವಾಡ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಪೀಠವೂ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಅಂತೆಯೇ ಕೋರ್ಟ್ ದಿನಾಂಕ ನಿಗಧಿಪಡಿಸಿ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.
ಇನ್ನು ಈ ಪ್ರಕರಣದ ಆರೋಪಿಗಳಾಗಿರುವ ರುದ್ರೇಶ, ವೈ.ಎಂ.ಅರುಣ, ಮರುಳಸಿದ್ದಯ್ಯ ಹಾಗೂ ಜಿ.ಮರಿಸ್ವಾಮಿಗೂ ಅವರಿಗೂ ಸಹ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಏನಿದು ಪ್ರಕರಣ?
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್ನಲ್ಲಿ ಕೇಳಿಬಂದಿತ್ತು. ಈ ಬಗ್ಗೆ ಸಂತ್ರಸ್ತೆಯ ತಾಯಿ ಬಿಎಸ್‌ವೈ ವಿರುದ್ಧ ಆರೋಪ ಮಾಡಿದ್ದರು.





