ಬೆಂಗಳೂರು : ದೇಶದ ಹಿರಿಮೆಯನ್ನು ಎತ್ತಿ ಹಿಡಿಯಬೇಕಿದ್ದ ಹಾಕಿ ತಂಡದ ಸದಸ್ಯನೊಬ್ಬ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾನೆ. ಹೌದು, ಭಾರತೀಯ ಹಾಕಿ ತಂಡದ ಸದಸ್ಯನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವರುಣ್ ಕುಮಾರ್ ಮೂಲತಃ ಹಿಮಾಚಲ ಪ್ರದೇಶ ಮೂಲದವನಾಗಿದ್ದು, ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿದ್ದಾನೆ. 2017ರಲ್ಲಿ ಭಾರತ ತಂಡದ ಪರ ಪಾದಾರ್ಪಣೆ ಮಾಡಿದ್ದ.
2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ. 2022ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದ. 2020 ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯನಾಗಿದ್ದ.
ಕಂಚಿನ ಸಾಧನೆ ಬಳಿಕ ವರುಣ್ ಕುಮಾರ್ 1 ಕೋಟಿ ಬಹುಮಾನ ಸಿಕ್ಕಿತ್ತು.ಹಿಮಾಚಲ ಪ್ರದೇಶ ಸರ್ಕಾರ 1 ಕೋಟಿ ಬಹುಮಾನ ಘೋಷಿಸಿತ್ತು. 2021 ನೇ ಸಾಲಿನ ಅರ್ಜುನ ಪ್ರಶಸ್ತಿಗೂ ವರುಣ್ ಕುಮಾರ್ ಭಾಜನರಾಗಿದ್ದ ಎಂದು ತಿಳಿದು ಬಂದಿದೆ
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…