ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣದ ವಿಚಾರಣೆಗೆ ಒಳಗಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬೆಂಗಳೂರಿನ ಒಂದನೇ ತ್ವರಿತಗತಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಿಎಸ್ ಯಡಿಯೂರಪ್ಪ ಮೇಲಿನ ಆರೋಪ ಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಾಲಯ, ಜುಲೈ. 15ಕ್ಕೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದ ಆದೇಶ ಹೊರಡಿಸಿದೆ.
ಅಪ್ರಾಪ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಇನ್ನು ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.
ತನಿಖೆ ನಡೆಸಿದ್ದ ಸಿಐಡಿ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಪಟ್ಟಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಅರುಣ್, ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರ ವಿರುದ್ಧ ಒಂದನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಪಟ್ಟಿ ಸಲ್ಲಿಸಿದ್ದರು, ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಎಸ್‌ವೈ ಮತ್ತು ಸಂಗಡಿಗರಿಗೆ ಸಮನ್ಸ್ ನೀಡಿದೆ.
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…
ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…
ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…