Mysore
30
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ | ಭಯೋತ್ಪಾನೆಗೆ ಸಮ : ಸಿಎಂ ಸಿದ್ದರಾಮಯ್ಯ

cm siddaramiha

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಈ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ  ಎಂದಿದ್ದಾರೆ.

Tags:
error: Content is protected !!