cm siddaramiha
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಈ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದಿದ್ದಾರೆ.
ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…