ಬಳ್ಳಾರಿ: ಇಲ್ಲಿನ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋಟಿ ಹಣ ಪತ್ತೆಯಾಗಿದೆ. ಜತೆಗೆ ಚಿನ್ನ, ಬೆಳ್ಳಿಯ ಆಭರಣವೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಳ್ಳಾರಿ ಡಿವೈಎಸ್‌ಪಿ ಮತ್ತು ಬ್ರೂಸ್‌ಪೇಟೆಯ ಪೊಲೀಸರು ಖಚಿತ ಮಾಹಿತಿ ಆಧರಿಸಿ ನಗರದ ಕಂಬಳಿ ಬಜಾರ್‌ನ ಆಭರಣದಂಗಡಿಯ ಮಾಲೀಕರ ಮನೆಯ ಮೇಲೆ ಭಾನುವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಆಗ ಅಪರಾ ಪ್ರಮಾಣದ ಹಣ, ಆಭರಣ ಪತ್ತೆಯಾಗಿದೆ.
ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಬ್ರೂಸ್‌ಪೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.






