ರಾಜ್ಯ

ಬಳ್ಳಾರಿಯಲ್ಲಿ ದಾಖಲೆಯಿಲ್ಲದ 5.60 ಕೋಟಿ ಹಣ, ಚಿನ್ನ-ಬೆಳ್ಳಿ ಆಭರಣ ಜಪ್ತಿ

ಬಳ್ಳಾರಿ: ಇಲ್ಲಿನ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋಟಿ ಹಣ ಪತ್ತೆಯಾಗಿದೆ. ಜತೆಗೆ ಚಿನ್ನ, ಬೆಳ್ಳಿಯ ಆಭರಣವೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಳ್ಳಾರಿ ಡಿವೈಎಸ್‌ಪಿ ಮತ್ತು ಬ್ರೂಸ್‌ಪೇಟೆಯ ಪೊಲೀಸರು ಖಚಿತ ಮಾಹಿತಿ ಆಧರಿಸಿ ನಗರದ ಕಂಬಳಿ ಬಜಾರ್‌ನ ಆಭರಣದಂಗಡಿಯ ಮಾಲೀಕರ ಮನೆಯ ಮೇಲೆ ಭಾನುವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಆಗ ಅಪರಾ ಪ್ರಮಾಣದ ಹಣ, ಆಭರಣ ಪತ್ತೆಯಾಗಿದೆ.

ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಬ್ರೂಸ್‌ಪೇಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

2 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

4 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

4 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

5 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

6 hours ago