ಮಡಿಕೇರಿ : ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿರುವುದರಿಂದ ಮಡಿಕೇರಿ ನಗರದ ಮಹದೇವಪೇಟೆಯಲ್ಲಿರುವ ಪಿಎಫ್ಐ ಕಚೇರಿಗೆ ಅಧಿಕಾರಿಗಳು ಹಾಗೂ ಪೊಲೀಸರು ಬೀಗ ಜಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಆದೇಶದ ಹಿನ್ನೆಲೆ ಉಪವಿಭಾಗಧಿಕಾರಿ ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಬುಧವಾರ ರಾತ್ರಿ ಕಚೇರಿಯನ್ನು ತಪಾಸಣೆ ನಡೆಸಲಾಯಿತು. ನಂತರ ಬೀಗ ಜಡಿದು ಸೀಲ್ ಮಾಡಲಾಯಿತು. ತಪಾಸಣೆ ವೇಳೆ ಕಚೇರಿಯಲ್ಲಿ ಯಾವುದೇ ದಾಖಲೆಗಳು ಲಭ್ಯವಾಗಿಲ್ಲವೆಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಗರಠಾಣಾ ಪೊಲೀಸರ ಬಂದೋಬಸ್ತ್ ನೊಂದಿಗೆ ಅಧಿಕಾರಿಗಳು ದಾಳಿ ನಡೆಸಿದರು.