ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.
ಮಂಗಳವಾರ (ಜೂನ್.18) ಮಾಧ್ಯಮಗಳೊಂದಿಗೆ ಮಾತನಾಡಿ, ಪೊಲೀಸರ ನಿಷ್ಪಕ್ಷಪಾತ ಹಾಗೂ ಸಮಯಪ್ರಜ್ಞೆಯಿಂ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರು ಪ್ರಕರಣವನ್ನು ಬೇರೆ ದಿಕ್ಕಿಗೆ ಬದಲಾಯಿಸಲಾಗುತ್ತಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ಮಾಹಿತಿ ಕಲೆ ಹಾಕುವ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಮೃತ ವ್ಯಕ್ತಿಯನ್ನು ಅತ್ಯಂತ ದೌರ್ಜನ್ಯಯುತವಾಗಿ ಹತ್ಯೆ ಮಾಡಲಾಗಿದೆ ಎಂದು ದಯಾನಂದ್ ಮಾಹಿತಿ ನೀಡಿದರು.
ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮೂಲಕ ಮೃತ ವ್ಯಕ್ತಿಯ ಕುಟುಂಬಕ್ಕೆ ನಾವು ನ್ಯಾಯ ಒದಗಿಸಬೇಕಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಒಳಪಡಿಸುವ ವೇಳೆ ಸಮರ್ಪಕ ದಾಖಲೆಗಳನ್ನು ಒದಗಿಸಿ ಮೃತ ರೇಣುಕಾಸ್ವಾಮಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ದಯಾನಂದ್ ಹೇಳಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…