ರಾಜ್ಯ

ಪೊಲೀಸ್‌ ಧ್ವಜ ದಿನಾಚರಣೆ: ನಿಷ್ಠೆ, ದಕ್ಷತೆ ಮೆರೆದ ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ ನೀಡಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಧ್ವಜ ದಿನಾಚರಣೆಯಾಗಿರುವ ಹಿನ್ನೆಲೆ ನಿಷ್ಠೆ ಮತ್ತು ದಕ್ಷತೆ ಮೆರೆದ ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದಾರೆ.

ಕೋರಮಂಗಲ ಕವಾಯತು ಮೈದಾನದಲ್ಲಿ ಇಂದು (ಏಪ್ರಿಲ್‌.2) ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳಿಗೆ ಗೌರವಿಸಿ ಮಾತನಾಡಿದ ಅವರು, ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ‌ ಶ್ರಮ ಮತ್ತು ಸೇವೆ ಶ್ಲಾಘನೀಯ ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ತಿಳಿಸಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು. ಅಲ್ಲದೇ ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ ಎಂದು ಹೇಳಿದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

19 mins ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

46 mins ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

1 hour ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

4 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

4 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

4 hours ago