ಬಳ್ಳಾರಿ: ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 240, 192, 353(1) ಬಿಎನ್‌ಎಸ್ 2023 ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಹಾಜರಾಗಿಲ್ಲ. ಹೀಗಿರುವಾಗ ಆಗಸ್ಟ್.21ರಂದು ನೀವು ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವುದು ತಿಳಿದು ಬಂದಿದೆ.
ಆದ್ದರಿಂದ ನ್ಯಾಯಾಲಯ ನೀಡಿದ ನಿರೀಕ್ಷಣಾ ಜಾಮೀನು ಆದೇಶದ ಷರತ್ತಿನ ಪ್ರಕಾರ, ನೀವು ತನಿಖಾಧಿಕಾರಿಯ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕಿದೆ. ಆ ಷರತ್ತಿಗೆ ನೀವು ಆಗಸ್ಟ್.24ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ಗ್ರಾಮಾಂತರ ವೃತ್ತ ಠಾಣೆಯಲ್ಲಿ ತನಿಖಾಧಿಕಾರಿ ಮುಂದೆ ತಪ್ಪದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.





