ಹೈದರಾಬಾದ್: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಕರ್ನಾಟಕದಿಂದ ಕಾಂಗ್ರೆಸ್ ಹಾಗೂ ಬಿಜೆಪಿಯ ಅನೇಕ ನಾಯಕರು ತೆರಳಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ರಾಜ್ಯ ಸಚಿವ ಜಮೀರ್ ಅಹಮ್ಮದ್ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನಿನ್ನೆ ತಡ ರಾತ್ರಿ ಜಮೀರ್ ಅವರು ತಂಗಿದ್ದ ಹೈದರಾಬಾದ್‌ನ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹಮ್ಮದ್ ಖಾನ್, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್ ಕಳಿಸಲು ಪ್ರಯತ್ನ ಮಾಡಲಾಗುತ್ತಿ. ಆದರೇ ಯಾವುದೇ ಕಾರಣಕ್ಕು ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…