ಬೆಂಗಳೂರು: ಅಪ್ರಾಪ್ತ ಬಾಲಕೀಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ಸಂತ್ರಸ್ತೆಯ ಮೇಲೆ ಮಾಜಿ ಸಿಎಂ ಬಿಎಸ್‌ವೈ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆಯ ತಾಯಿ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದೂರಿನನ್ವಯ ಸದಾಶಿವನಗರ ಪೊಲೀಸರು ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354(A) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.