ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಧ್ವಜ ಯುದ್ಧ ಶುರುವಾದಂತಿದೆ. ನಿನ್ನೆ ( ಜನವರಿ 29 ) ಈ ಸಂಬಂಧ ಮಂಡ್ಯದಲ್ಲಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಿಂದೂಪರ ಸಂಘಟನೆಗಳ ಜತೆಗೂಡಿ ಪ್ರತಿಭಟನೆ ನಡೆಸಿದ್ದರು.
ಇದಾದ ಬೆನ್ನಲ್ಲೇ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಾರುತ್ತಿರುವ ಬಾವುಟಗಳ ವಿರುದ್ಧ ಹಿಂದೂಪರ ಕಾರ್ಯರ್ತರು ದನಿ ಎತ್ತಿದ್ದಾರೆ. ಕೆರಗೋಡಿನಲ್ಲಿ ಹನುಮ ಧ್ವಜದ ಬದಲು ರಾಷ್ಟ್ರಧ್ವಜ ಹಾರಿಸಿ ʼಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರಧ್ವಜದ ಬದಲು ಯಾವುದೇ ಧಾರ್ಮಿಕ ಧ್ವಜ ಹಾರಿಸುವಂತಿಲ್ಲʼ ಎಂದು ಕಾಂಗ್ರೆಸ್‌ನ ಹಲವರು ಹೇಳಿದ್ದರು. ಹಾಗಿದ್ದರೆ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿರುವ ಹಸಿರು ಧ್ವಜಕ್ಕೆ ಅನುಮತಿ ಹೇಗೆ ಸಿಕ್ಕಿತು ಎಂದು ಪ್ರಶ್ನೆಯನ್ನು ಹಾಕಿದ್ದರು.
ಹೀಗೆ ಸಾಮಾಜಿಕ ಜಾಲತಾಣದಲ್ಲಿ ಈ ಧ್ವಜದ ಕುರಿತು ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ಹಸಿರು ಧ್ವಜವನ್ನು ತೆರವುಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸದ್ಯ ಚಾಂದಿನಿ ಚೌಕ್‌ನಲ್ಲಿ ತ್ರಿರಂಗ ಹಾರುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…