ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ್ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…