ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಸಾವಿನ ಪ್ರಕರಣ ಸಂಬಂಧ ಪೊಲೀಸರನ್ನು ಅಮಾನತು ಮಾಡಿರುವುದು ಕೇವಲ ನಾಟಕವಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪೊಲೀಸ್ ಇಲಾಖೆ ಸಲಹೆ ಧಿಕ್ಕರಿಸಿದ್ದಕ್ಕೆ 11 ಜೀವಗಳ ಬಲಿಯಾಗಿದೆ. ಅದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತಮ್ಮ ತಪ್ಪು ಮುಚ್ಚಿಕೊಳ್ಳಲು ಪೊಲೀಸರನ್ನು ಅಮಾನತು ಮಾಡಲಾಗಿದೆ. ಇದು ಒಂದು ನಾಟಕ. ಒಂದು ತಿಂಗಳು ಸಸ್ಪೆಂಡ್ ಎಂದು ನಾಟಕ ಮಾಡುತ್ತೇವೆ, ಬೇಸರ ಮಾಡಿಕೊಳ್ಳಬೇಡಿ ಎಂಬುದಾಗಿ ಮೊದಲೇ ಹೇಳಿದ್ದಾರೆ ಅಷ್ಟೇ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.





