Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಗಾಯಕ ಸೋನು ನಿಗಮ್‌ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಪೊಲೀಸರು: ಕಾರಣ ಇಷ್ಟೇ

Sonu Nigam

ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಉದ್ಧಟತನ ಮೆರೆಯುತ್ತಿರುವ ಗಾಯಕ ಸೋನು ನಿಗಮ್‌ ವಿರುದ್ಧ ಪೊಲೀಸರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್‌ಗೆ ಕನ್ನಡ ಹಾಡು ಹಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದರು.

ಇದಕ್ಕೆ ಸೋನು ನಿಗಮ್‌ ಕನ್ನಡವನ್ನು ಪಹಲ್ಗಾಮ್‌ ದಾಳಿಗೆ ಹೋಲಿಸಿ ಕಿಡಿಕಾರಿದ್ದರು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದಲ್ಲದೇ ಗಾಯಕನ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸೋನು ನಿಗಮ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ವೇಳೆ ಹೈಕೋರ್ಟ್‌ ಮೊರೆ ಹೋಗಿದ್ದ ಅವರಿಗೆ ಬಲವಂತದ ಕ್ರಮ ಬೇಡ. ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸರು ಸೋನು ನಿಗಮ್‌ಗೆ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇಷ್ಟಾದರೂ ಸೋನು ನಿಗಮ್‌ ವಿಚಾರಣೆಗೆ ಇದುವರೆಗೂ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಆವಲಹಳ್ಳಿ ಪೊಲೀಸರು ಹೈಕೋರ್ಟ್‌ ಮಧ್ಯಂತರ ಆದೇಶ ತೆರವು ಮಾಡುವಂತೆ ಅಡ್ವೋಕೇಟ್‌ ಜನರಲ್‌ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!