Sonu Nigam
ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಉದ್ಧಟತನ ಮೆರೆಯುತ್ತಿರುವ ಗಾಯಕ ಸೋನು ನಿಗಮ್ ವಿರುದ್ಧ ಪೊಲೀಸರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್‌ಗೆ ಕನ್ನಡ ಹಾಡು ಹಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದರು.
ಇದಕ್ಕೆ ಸೋನು ನಿಗಮ್ ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಕಿಡಿಕಾರಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೇ ಗಾಯಕನ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ವೇಳೆ ಹೈಕೋರ್ಟ್ ಮೊರೆ ಹೋಗಿದ್ದ ಅವರಿಗೆ ಬಲವಂತದ ಕ್ರಮ ಬೇಡ. ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಸೋನು ನಿಗಮ್‌ಗೆ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇಷ್ಟಾದರೂ ಸೋನು ನಿಗಮ್ ವಿಚಾರಣೆಗೆ ಇದುವರೆಗೂ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಆವಲಹಳ್ಳಿ ಪೊಲೀಸರು ಹೈಕೋರ್ಟ್ ಮಧ್ಯಂತರ ಆದೇಶ ತೆರವು ಮಾಡುವಂತೆ ಅಡ್ವೋಕೇಟ್ ಜನರಲ್ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…