ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ.
ಡ್ರಗ್ಸ್ ಪದ ಬಳಸಿ ಮಾಡಿದ್ದ ವಿಡಿಯೋವನ್ನು ಪೊಲೀಸರು ಡಿಲೀಟ್ ಮಾಡಿಸಿದ್ದಾರೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು, ವಿಕಾಸ್‌ಗೆ ದೂರವಾಣಿ ಕರೆ ಮಾಡಿ ಡ್ರಗ್ಸ್ ಪದ ಬಳಸಿ ಮಾಡಲಾಗಿದ್ದ ವಿಡಿಯೋವನ್ನು ತೆಗೆಸಿದ್ದಾರೆ.
ಭಿನ್ನ ವಿಭಿನ್ನ ರೀಲ್ಸ್‌ಗಳನ್ನು ಶೇರ್ ಮಾಡಿ ಸಖತ್ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ ಅವರು, ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ರೀಲ್ಸ್ ಮಾಡಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಇದೇ ರೀಲ್ಸ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿದ್ದು, ಇದೀಗ ಅದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಡಿಲೀಟ್ ಮಾಡಿಸಿದ್ದಾರೆ.
ಇಂದಿನ ಯುವಕರು ಎಂಜಾಯ್‌ಗೋಸ್ಕರ ಅಂತ ಮದ್ಯಪಾನ ಮಾಡುವುದು, ಸಿಗರೇಟ್ ಸೇದೋದು, ಹುಡುಗೀರ್ ಹಿಂದೆ ಹೋಗ್ತಾರೆ. ಆದರೆ, ನಾನು ಎಂಜಾಯ್‌ಮೆಂಟ್ ಮಾಡಲು ಡ್ರಗ್ಸ್ ತಗೋತೀನಿ ಎನ್ನುವ ರೀತಿಯಲ್ಲಿ ವಿಕಾಸ್ ಹಾಗೂ ಅವರ ಸ್ನೇಹಿತ ವಿಡಿಯೋ ಮಾಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದರು.
ಇದನ್ನು ಗಮನಿಸಿದ ಪೊಲೀಸರು ಕೂಡಲೇ ವಿಕಾಸ್‌ಗೆ ಕರೆ ಮಾಡಿ ಆ ವಿಡಿಯೋವನ್ನು ತೆಗೆಸಿದ್ದಾರೆ. ಅಲ್ಲದೇ ಮತ್ತೆ ಎಂದು ಈ ರೀತಿಯ ವಿಡಿಯೋ ಮಾಡದಂತೆ ಸೂಚನೆ ಕೊಟ್ಟಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…