Mysore
23
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪ್ರೇರಿತ ಪಿತೂರಿ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಭಾಗಿಯಾಗಿಲ್ಲ. ಕಾಂಗ್ರೆಸ್‌ ಪಕ್ಷ ಮುಗಿಸಲು ವಿರೋಧಿಗಳಿಂದ ಈ ರೀತಿಯ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

ಪ್ರಕರಣದ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಭ್ರಷ್ಟಚಾರ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು ನಾವು- ನೀವಲ್ಲ. ಇ.ಡಿ ತನಿಖೆಯನ್ನು ನಾನು ನೋಡಿದ್ದೇನೆ. ಇದರ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದರು.

Tags:
error: Content is protected !!