ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕರ್ನಾಟಕಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಎದುರಿಸುತ್ತಿರುವ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವ ಶಕ್ತಿ ಪ್ರಧಾನಿ ಮೋದಿಗೆ ಮಾತ್ರ ಇದೆ. ತಮ್ಮ ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.
ಕಾವೇರಿ ನೀರು ಬಿಡುವಂತೆ ಪ್ರತಿ ವರ್ಷ ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುತ್ತದೆ. ನಮಗೆ ನೀರಿಲ್ಲದಿದ್ದರೂ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಕೊಡಿ ಎಂದು ಹೇಳುತ್ತಾರೆ. ಕಾವೇರಿ ಜಲಾಶಯಗಳಲ್ಲಿ ನೀರು ಎಷ್ಟಿದೆ ಎಂಬುದನ್ನು ನೋಡಲು ಸಿಡಬ್ಲ್ಯುಎಂಎ ಕರ್ನಾಟಕಕ್ಕೆ ಭೇಟಿ ನೀಡಿಲ್ಲ. ಈ ಎಲ್ಲಾ ಸಮಸ್ಯೆಗಳಿಗೂ ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಬಗೆಹರಿಸಲು ಸಾಧ್ಯ ಎಂದು ಹೇಳಿದರು.
“ಕಾವೇರಿ ಸಮಸ್ಯೆಗೆ ಪರಿಹಾರವಿದೆ. ಪ್ರಧಾನಿ ಮೋದಿ ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಾವುದೇ ರಾಜಕೀಯ ಬೇಡ, ಈ ಕಾರಣಕ್ಕಾಗಿ ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಡಬೇಕು” ಎಂದು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ಫೆ.1ರಂದು ರಾಜ್ಯಸಭೆಯ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಕಾವೇರಿ ಸಂಬಂಧ ಪ್ರಧಾನಿಗೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಲಾಗುವುದು. ಇನ್ನು ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ, ಕೊನೆಯ ಉಸಿರು ಇರುವವರೆಗೂ ಕಾವೇರಿ ವಿಚಾರವಾಗಿ ಹೋರಾಟ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…