ರಾಜ್ಯ

ಸೆಪ್ಟೆಂಬರ್‌ ವೇಳೆಗೆ ಬಿಜೆಪಿಯಲ್ಲೂ ರಾಜಕೀಯ ಕ್ರಾಂತಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೆಪ್ಟೆಂಬರ್‌ನಲ್ಲಿ ಚಳಿ ಇರುತ್ತದೆ. ಅದಕ್ಕಾಗಿ ಸ್ವಲ್ಪ ಬಿಸಿಯಾಗಲಿ ಎಂದು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ್ದೇನೆ. ರಾಜಕೀಯ ಬದಲಾವಣೆಯ ಬಗ್ಗೆ ಸೆಪ್ಟೆಂಬರ್‌ನಲ್ಲೇ ಹೇಳುತ್ತೇನೆ, ಈಗ ಹೇಳುವುದಿಲ್ಲ ಎಂದರು.

ಕ್ರಾಂತಿ ಎಂದರೆ ಹಲವು ರೀತಿಗಳಿವೆ. ಬಾಬು ಜಗಜೀವನರಾವ್ ಹಸಿರು ಕ್ರಾಂತಿ ಮಾಡಿದರು. 1919ರ ಅಕ್ಟೋಬರ್‌ನಲ್ಲಿ ರಷ್ಯಾದಲ್ಲಾದ ಕ್ರಾಂತಿಯನ್ನೇ ನೆನಪಿಸಿಕೊಳ್ಳಬೇಕೇ? ಎಂದರು.

ಕಾಂಗ್ರೆಸ್‍ನಲ್ಲೇ ಕ್ರಾಂತಿಯಾಗುತ್ತದೆ ಎಂದು ಭಾವಿಸಬಾರದು. ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಆರ್ಎಸ್‍ಎಸ್‍ನಲ್ಲಿ 75 ವರ್ಷಗಳ ಬಳಿಕ ಯಾರೂ ಜವಾಬ್ದಾರಿ ಸ್ಥಾನದಲ್ಲಿರಬಾರದು ಎಂದು ನಿಯಮ ಇದೆ. ಅದರಿಂದಾಗಿಯೇ ಎಲ್.ಕೆ.ಅಡ್ವಾಣಿಯವರನ್ನು ಬದಿಗಿರಿಸಿ ನರೇಂದ್ರ ಮೋದಿ ರಾಜಕೀಯ ಮುನ್ನೆಲೆಗೆ ಬಂದರು. ಅದೇ ನಿಯಮ ಈಗ ಮೋದಿಯವರಿಗೂ ಅನ್ವಯವಾಗುತ್ತದೆ. ಮಾರ್ಗದರ್ಶಕ ಮಂಡಳಿಗೆ ಮೋದಿ ಹೋಗಬೇಕಾಗುತ್ತದೆ. ಕೇಂದ್ರದಲ್ಲೂ ಬದಲಾವಣೆಯಾಗುತ್ತದೆ. ಬೇರೆಯವರಿಗೆ ಅವಕಾಶ ಸಿಗುತ್ತದೆ. ಅದು ಕ್ರಾಂತಿಯಲ್ಲವೇ? ಎಂದು ಪ್ರಶ್ನೆ ಮಾಡಿದರು.

ಇನ್ನು ಡಿ.ಕೆ.ಶಿವಕುಮಾರ್ ಪ್ರಧಾನಿಯಾಗುತ್ತಾರೋ, ಮುಖ್ಯಮಂತ್ರಿಯಾಗುತ್ತಾರೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದೇ.30ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ. ಅವರು ಬಂದು ಈ ರೀತಿ ಮಾತನಾಡಬೇಡಿ ಎಂದು ತಾಕೀತು ಮಾಡಿದರೂ ನಾನು ಕೇರ್ ಮಾಡುವುದಿಲ್ಲ ಎಂದು ಹೇಳಬೇಕೆಂಬುದು ಮಾಧ್ಯಮಗಳ ನಿರೀಕ್ಷೆ. ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

11 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

13 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

19 hours ago