Government will be rock solid for five years CM Siddaramaiah
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿಕೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದರು.
ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದುಃಖ ಮತ್ತು ಸಂಕಟ ಇರುವುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ ಎಂದರು.
2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಲಿಲ್ಲ. ಮಾತ್ರವಲ್ಲ ಇಲ್ಲಿಯವರೆಗೆ ಕನಿಷ್ಠ ಪಕ್ಷ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…