ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು.
ಅದು ನಮ್ಮ ಹೈಕಮಾಂಡ್‌ಗೆ ಬಿಟ್ಟದ್ದು, ಹೈಕಮಾಂಡ್ ತೀರ್ಮಾನ ಮಾಡಿದರೆ ಆಗುತ್ತದೆ. ನಾನು ಈವರೆಗೂ ಆಶಾವಾದಿಯಾಗಿಯೇ ಬದುಕಿದ್ದೇನೆ. ಅದೇನು ಹೊಸದಾಗಿ ಆಗಬೇಕು ಅಂತೇನಿಲ್ಲ. ಎಲ್ಲರಿಗೂ ಜೀವನದಲ್ಲಿ ಏನೇನೋ ಆಗಬೇಕು ಅಂತೆಲ್ಲಾ ಇರುತ್ತದೆ. ಮನುಷ್ಯನಿಗೆ ಆಕಾಂಕ್ಷೆ ಅನ್ನೋದು ಇರಲೇಬೇಕು. ಇಲ್ಲ ಅಂದರೆ ಮನುಷ್ಯ ಅನಿಸಿಕೊಳ್ಳಲ್ಲ. ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ಎಂದು ಹೇಳಿದರು.





