Mysore
28
clear sky

Social Media

ಮಂಗಳವಾರ, 20 ಜನವರಿ 2026
Light
Dark

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಸಿಎಂ

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ,  ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅವರು ಇಂದು(ಏ.20) ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ನಾವು ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.

Tags:
error: Content is protected !!