ರಾಜ್ಯ

ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ : ಎಚ್‌ಡಿಕೆ ಒತ್ತಾಯ

ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ

ಆಂದೋಲನ ಡೆಸ್ಕ್

Recent Posts

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

11 hours ago

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

15 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

15 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

15 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

22 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

22 hours ago