Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಿಎಂ, ಡಿಸಿಎಂ ಬಳಿ ಸ್ಪಷ್ಟ ಉತ್ತರ ಸಿಗಲಿದೆ: ಸಚಿವ ಸತೀಶ್‌ ಜಾರಕಿಹೊಳಿ

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆಯ ಕುರಿತಾಗಿ ಅವರನ್ನೇ ಕೇಳಿ ಎಂದರು.

ಒಂದು ಪಕ್ಷದಲ್ಲಿ, ಕುಟುಂಬದಲ್ಲಿ ಘರ್ಷಣೆಗಳು ನಡೆಯುವುದು ಸಹಜ. ನಾವು ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ. ಈಗ ಸಿಎಂ, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಚರ್ಚೆ ಅನಗತ್ಯ. 2028ಕ್ಕೆ ನಾವು ಸಿಎಂ ಹುದ್ದೆಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಇದನ್ನು ಅಲ್ಲಗೆಳೆದರು. ಅಧಿಕಾರ ಹಂಚಿಕೆ ಕುರಿತಂತೆ ಸಚಿವ ಜಿ.ಪರಮೇಶ್ವರ್‌ ಅವರು ಸಹ ಆಕ್ಷೇಪಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಇಬ್ಬರೇ ಒಪ್ಪಂದ ಮಾಡಿಕೊಂಡರೆ ನಾವೆಲ್ಲಾ ಯಾಕಿರಬೇಕು ಎಂದು ಪ್ರಶ್ನೆ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದರು.

 

 

 

Tags: