ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಯ ಕುರಿತಾಗಿ ಅವರನ್ನೇ ಕೇಳಿ ಎಂದರು.
ಒಂದು ಪಕ್ಷದಲ್ಲಿ, ಕುಟುಂಬದಲ್ಲಿ ಘರ್ಷಣೆಗಳು ನಡೆಯುವುದು ಸಹಜ. ನಾವು ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ. ಈಗ ಸಿಎಂ, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಚರ್ಚೆ ಅನಗತ್ಯ. 2028ಕ್ಕೆ ನಾವು ಸಿಎಂ ಹುದ್ದೆಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಇದನ್ನು ಅಲ್ಲಗೆಳೆದರು. ಅಧಿಕಾರ ಹಂಚಿಕೆ ಕುರಿತಂತೆ ಸಚಿವ ಜಿ.ಪರಮೇಶ್ವರ್ ಅವರು ಸಹ ಆಕ್ಷೇಪಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೇ ಒಪ್ಪಂದ ಮಾಡಿಕೊಂಡರೆ ನಾವೆಲ್ಲಾ ಯಾಕಿರಬೇಕು ಎಂದು ಪ್ರಶ್ನೆ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…