ರಾಜ್ಯ

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈ ಹಿಂದೆ ಗ್ರಾಮೀಣ ಭಾಗದಲ್ಲಿ ದೊಂಬರಾಟ ಆಡುತ್ತಿದ್ದರು. ಅದು ನೆನಪಿಸುವಂತಿದೆ ಎಂದು ಆರೋಪಿಸಿದರು.

ಉಪಮುಖ್ಯಮಂತ್ರಿ ಡಿಕೆಶಿಯವರು ಮಾಡುತ್ತಿರುವಷ್ಟು ದೇವರ ಪೂಜೆಯನ್ನು ನಾನೂ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿಯವರಿಗೆ ವೋಟ್ ಚೋರಿ ವಿಚಾರ ಮಾತ್ರ ಗೊತ್ತು. ಆದರೆ ಕರ್ನಾಟಕದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತೆಲಂಗಾಣಕ್ಕೆ ಹೋಗಿದ್ದೂ ಸೇರಿದಂತೆ ಬೇರೆಬೇರೆ ವಿಚಾರಗಳ ಬಗ್ಗೆ ಅರಿವೇ ಇಲ್ಲ ಎಂದು ಟೀಕಿಸಿದರು.

ನರೇಗಾ ಹೆಸರು ಬದಲಾವಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೌಡರು, ಕಾಂಗ್ರೆಸ್ ನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಎಲ್ಲಿಲ್ಲದ ಪ್ರೀತಿ ಅಭಿಮಾನ ಈಗ ಹೃದಯದಿಂದ ಬಂದಿದೆ. ಈ ಹಿಂದೆ ದೇಶದ ಪ್ರಧಾನಿಯಾಗಿದ್ದ ಪಂಡಿತ್ ಜವಹರಲಾಲ್ ನೆಹರೂ, ಇಂದಿರಾಗಾಂಧಿಯವರ ಕಾಲದಲ್ಲಿ ಅವರು ಗಾಂಧಿ ಫೋಟೊಗಳನ್ನೇ ಬಳಸುತ್ತಿರಲಿಲ್ಲ. ಒಂದು ವೇಳೆ ಅವರು ಪ್ರಚಾರದ ಸಂದರ್ಭದಲ್ಲಿ ಗಾಂಧೀಜಿ ಫೋಟೊ ಬಳಸಿರುವುದನ್ನು ಸಾಬೀತುಪಡಿಸಿದರೆ ನಾನು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

8 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

9 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

9 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

9 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

9 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago