ರಾಜ್ಯ

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ ಮಾತಿನ ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ. ಹೈಕಮಾಂಡ್‌ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರಿಗೂ ಹೈಕಮಾಂಡ್‌ ತೀರ್ಮಾನ ಅನ್ವಯ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಗರ ಪ್ರದೇಶ, ಮುನಿಸಿಪಾಲಿಟಿಗಳಲ್ಲಿ ನಗರಾಭಿವೃದ್ಧಿ ವ್ಯಾಪ್ತಿಯ ಆಸ್ತಿಗಳಿಗೆ ಬಿ ಖಾತಾ ಅಭಿಯಾನ ಶುರು ಮಾಡಿದ್ದೇವೆ. ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಸಮಿತಿ ವರದಿ ಕೊಟ್ಟ ಮೇಲೆ ರಾಜ್ಯದಲ್ಲಿ ಒಂದು ಕಾನೂನು ಮಾಡಿದ್ದೇವೆ. ರೆವಿನ್ಯೂ ಬಡಾವಣೆ, ಸೈಟ್‌ಗಳಿಗೆ ಸರ್ಕಾರ ಸೌಲಭ್ಯಗಳನ್ನು ಕೊಡಲಾಗಿದೆ. ಅವರು ಯಾರು ಸರ್ಕಾರಕ್ಕೆ ಕಂದಾಯ ಕಟ್ಟುತ್ತಿರಲಿಲ್ಲ. ಅದಕ್ಕಾಗಿ ಬಿ ಖಾತಾ ಅಭಿಯಾನ ಮಾಡಬೇಕು ಎಂದು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

3 mins ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

6 mins ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

10 mins ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

14 mins ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

20 mins ago

ಚುನಾವಣಾ ಆಯೋಗದ ಬಿಕ್ಕಟ್ಟು ಬಗೆಹರಿಯುವುದು ಹೇಗೆ?

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗದ ಈಗಿನ ಕಾರ್ಯವೈಖರಿ, ನಿರಂಕುಶ ಅಧಿಕಾರ ಚಲಾವಣೆ ಇಂದು…

30 mins ago