ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ (ಜೂನ್ 4) ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದುಕೊಂಡಿತು. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್ 2 ಮತ್ತು ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದವು.
ಫಲಿತಾಂಶ ಹೊರಬಿದ್ದ ಬಳಿಕ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಕ್ಷೇತ್ರದ ಫಲಿತಾಂಶದ ಕುರಿತು ತಾವು ನೀಡಿದ್ದ ಹೇಳಿಕೆಯಿಂದಾಗಿ ತೀವ್ರ ಟ್ರೋಲ್‌ಗೆ ಒಳಗಾದರು. ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿಗಿಂತ ಕೇವಲ ಒಂದು ಮತ ಹೆಚ್ಚು ಲೀಡ್ ಪಡೆದರೂ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ಟ್ರೋಲ್ ಆಗಿದ್ದು ಮಾತ್ರವಲ್ಲದೇ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ರಾಜೀನಾಮೆ ಪತ್ರ ಬರೆದಿದ್ದಾರೆ ಎಂದು ಪತ್ರವೊಂದೂ ಸಹ ವೈರಲ್ ಆಯಿತು. ಆದರೆ ಅಸಲಿಯತ್ತೇನೆಂದರೆ ಈ ಪತ್ರ ನಕಲಿಯಾಗಿದೆ. ಈ ಬಗ್ಗೆ ಸ್ವತಃ ಪ್ರದೀಪ್ ಈಶ್ವರ್ ಸಹ ಪ್ರತಿಕ್ರಿಯಿಸಿದ್ದು, ಇದೊಂದು ನಕಲಿ ಪತ್ರ, ಆ ಪತ್ರಕ್ಕೂ ನನಗೂ ಸಂಬಂಧವಿಲ್ಲ, ಕಿಡಿಗೇಡಿಗಳು ನಕಲಿ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ, ಈ ಬಗ್ಗೆ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…