ಹುಬ್ಬಳ್ಳಿ : ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ ಡಿಸಿಎಂ ಚರ್ಚೆ ವಿವಾದ ಹುಟ್ಟು ಹಾಕುವಲ್ಲಿ ಬಿಜೆಪಿ ಕೈವಾಡವಿದೆ ಎಂದಿದ್ದಾರೆ. ಈ ಬಗ್ಗೆ ಯಾವ ಆಧಾರವಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಮೂವರು ಡಿಸಿಎಂ ಸೃಷ್ಟಿ ಹಾಗೂ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೆ ರಾಜ್ಯದಲ್ಲಿ ಮೂವರು ಡಿಸಿಎಂಗಳ ಸ್ಥಾನ ಸೃಷ್ಠಿಸುವ ಕೂಗಿನ ಹಿಂದೆ ನೇರ ಸಿಎಂ ಸಿದ್ದರಾಮಯ್ಯ ಅವರದ್ದೇ ಪಾತ್ರವಿದೆ ಎಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ಯಾರ ಪರವೂ ಇಲ್ಲ ಅಥವಾ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಿರುದ್ಧವೂ ಅಲ್ಲ. ಇದು ಕಾಂಗ್ರೆಸ್ ಆಂತರಿಕ ವಿಚಾರ. ಈ ವಿವಾದದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಶಾಸಕರಿಗೆ, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೌನ ತಾಳಿದ್ದಾರೆ. ಡಿಸಿಎಂ ಬಗ್ಗೆ ಚರ್ಚೆ ಮಾಡಬೇಡಿ ಎಂದು ಯಾರಿಗೂ ಹೇಳಿಲ್ಲ ಯಾಕೆ..? ಇದರ ಹಿಂದೆ ಇರುವ ಮರ್ಮವೇನು ಎಂದು ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದರು.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…