ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಹೀನಾಯ ಸೋಲು ಕಂಡಿದ್ದು, ನಕರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ಅಲ್ಲಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಸಾರ್ವಜನಿಕರು ಭರ್ಜರಿ ತೀರ್ಪು ನೀಡಿದ್ದಾರೆ. ನಕಾರಾತ್ಮಕ ತಂತ್ರಗಳ ಮೂಲಕ ರಾಜಕೀಯ ಮಾಡುತ್ತಿದ್ದವರಿಗೆ ಇಲ್ಲಿನ ಜನತೆ ತಕ್ಕಪಾಠ ಕಲಿಸಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಅರಾಜಕತೆ ಸೃಷ್ಠಿ ಮಾಡುತ್ತಿದ್ದವರಿಗೆ ಜನರ ತೀರ್ಪಿನಿಂದ ಕಪಾಳ ಮೋಕ್ಷವಾಗಿದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಂಬಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಶಸ್ವಿಯಾದ ರಚನಾತ್ಮಕ ಹಾಗೂ ಪ್ರಬಲ ರಾಜಕೀಯ ಪಕ್ಷ ಇರಬೇಕು ಎನ್ನುವುದು ನಮ್ಮ ಅಭಿಲಾಷೆ ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 45ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಈಗಾಗಲೇ ಬಿಜೆಪಿ ಗೆದ್ದಿದೆ. ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ರಾಜನಾಥ್ ಸಿಂಗ್ ಹಾಗೂ ದೆಹಲಿಯ ಸಾರ್ವಜನಿಕರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.





