ಹುಬ್ಬಳ್ಳಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಬ್ಬರೂ ಅಪ್ರಬುದ್ಧ ರಾಜಕಾರಣಿ ಅವರ ಆರೋಪಕ್ಕೆ ಉತ್ತರಿಸುವ ಅಗತ್ಯ ನನಗೆ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು(ಏಪ್ರಿಲ್.6) ಕೇಂದ್ರ ಸರ್ಕಾರ ವಕ್ಫ್ ಬಿಲ್ ತಿದ್ದುಪಡಿ ಬೆನ್ನಲ್ಲಿಯೇ ಕ್ರಿಶ್ಚಿಯನ್ನರ ಆಸ್ತಿ ಮೇಲೆ ಆರ್‌ಎಸ್‌ಎಸ್ ಕಣ್ಣಿಟ್ಟಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಕ್ಫ್ ಮಸೂದೆಯನ್ನು ಮಂಡಿಸುವ ವೇಳೆ ರಾಹುಲ್ ಹಾಗೂ ಸಂಸದೆ ಪ್ರಿಯಾಂಕಾ ವಾದ್ರಾ ಸಂಸತ್ತಿನ ಒಳಗೆ ಬಂದಿರಲಿಲ್ಲ. ಮುಸ್ಲಿ ಪರವಾಗಿಯೇ ರಾಹುಲ್ ಮತ್ತು ಪ್ರಿಯಾಂಕ ಅವರು ಇದ್ದಾರೆ. ಹೀಗಿದ್ದರೂ ಅವರೇಕೆ ಲೋಕಸಭೆಗೆ ಬರಲಿಲ್ಲ.? ರಾಹುಲ್ ಗಾಂಧಿಗೆ ಗಂಭೀರತೆಯೇ ಇಲ್ಲ. ಅವರ ಹೇಳಿಕೆಗೆ ನಾನೇಕೆ ಪ್ರತಿಕ್ರಿಯೆ ನೀಡಬೇಕು. ಅವರೊಬ್ಬ ಅಪ್ರಬುದ್ಧ ರಾಜಕಾರಣಿ, ಅವರ ಮಾತಿಗೆ ಉತ್ತರಿಸುವ ಅವಶ್ಯಕತೆ ನನಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇರಳದ ವಯನಾಡಿನಲ್ಲಿ ರಾಹುಲ್ ಹಾಗೂ ಪ್ರಿಯಾಂಕಾ ಅವರ ವಿರುದ್ಧ ಅಲ್ಲಿನ ಜನತೆ ಹೋರಾಟ ನಡೆಸುತ್ತಿದ್ದಾರೆ. ಹಾಗಾಗಿ ಆ ವಿಚಾರವನ್ನು ಬೇರೆ ಕಡೆಗೆ ಸೆಳೆಯಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರೇ ಕೆಲ ಚರ್ಚ್‌ಗಳನ್ನು ವಕ್ಫ್ ಮಾಡಲು ಹೊರಟಿದ್ದರು. ಆದರೆ ವಕ್ಫ್ ತಿದ್ದುಪಡಿಯಿಂದಾಗಿ ಕ್ರಿಶ್ಚಿಯನ್ನರೂ ಇದೀಗ ಖುಷಿಯಲ್ಲಿದ್ದಾರೆ ಎಂದರು.
ಓಟ್ ಬ್ಯಾಂಕ್ ಜಾಸ್ತಿ ಇದೆಯೆಂಬ ಕಾರಣಕ್ಕೆ ಕ್ರಿಶ್ಚಿಯನ್ನರನ್ನು ಬಿಟ್ಟು ಮುಸ್ಲಿಮರ ಬೆನ್ನುಹತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬರೀ ಓಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಇನ್ನೂ ದೇಶದಲ್ಲಿ ವಕ್ಫ್ ಆಸ್ತಿ 18 ಲಕ್ಷದಿಂದ 39 ಲಕ್ಷ ಎಕರೆಗೆ ಏರಿಕೆಯಾಗಿದೆ. ಅದಕ್ಕೆ ಸರಿಯಾದ ರೀತಿಯಲ್ಲಿ ಆದಾಯ ಬಂದರೆ ಮುಸಲ್ಮಾನರಿಗೂ ಖುಷಿಯಾಗುತ್ತದೆ ಎಂದು ಹೇಳಿದರು.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…