ಕಲಬುರ್ಗಿ: ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ 2029ರ ವೇಳೆಗೆ ಒನ್ ನೇಷನ್ ಒನ್ ಎಲೆಕ್ಷನ್‌ಗೆ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್‌ನಿಂದ ಭಾರತದ ಅರ್ಥ ವ್ಯವಸ್ಥೆ ಬದಲಾಗಲಿದೆ. ರಾಜಕೀಯ ಸ್ಥಿರತೆ ಬಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೊಂಡರೆ ತಾನು ಪ್ಯಾನ್ ಇಂಡಿಯಾ ಪಾರ್ಟಿ ಆಗಲು ಸಾಧ್ಯವಿಲ್ಲ ಎಂಬ ಭಯದಲ್ಲಿ ಕಾಂಗ್ರೆಸ್ ವಿಶೇಷ ರೀತಿ ವರ್ತನೆ ಮಾಡುತ್ತಿದೆ. ಕಾಂಗ್ರೆಸ್‌ನವರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ಭಯ. ಹಾಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆಗೆ ತಗಾದೆ ತೆಗೆಯುತ್ತಿದ್ದಾರೆ. ಈ ಆತಂಕಕ್ಕೆ ಯಾವುದೇ ರೀತಿಯ ಅರ್ಥವಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಆರ್ಥಿಕತೆಯಲ್ಲಿ ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿದೆ. ಇನ್ನೆರಡು ವರ್ಷದಲ್ಲಿ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ. 2047ಕ್ಕೆ ಜಗತ್ತಿನ ಅತ್ಯಂತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.





