ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ʼಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಮತ್ತು ನ್ಯಾ.ವೆಂಕಟೇಶ್ ನಾಯ್ಕ್ ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಮಗ್ರ ಸಾರಾಂಶ ಸಲ್ಲಿಸಲು ಪ್ರಜ್ವಲ್ ಪರ ವಕೀಲರಿಗೆ ಸೂಚನೆ ನೀಡಿದೆ. ಜೊತೆಗೆ ಪ್ರಜ್ವಲ್ ಮೇಲ್ಮನವಿ ಬಗ್ಗೆ ಪ್ರತಿವಾದಿಯಾಗಿ ವಾದಿಸಲು ಎಸ್‌ಪಿಪಿ ನೇಮಕದ ಬಗ್ಗೆಯೂ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
ಪ್ರಜ್ವಲ್ ರೇವಣ್ಣ ಮೇಲ್ಮನವಿಯಲ್ಲೇನಿದೆ?
ರಾಜಕೀಯ ದುರುದ್ದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್‌ಐಆರ್ ದಾಖಲಿಸಲಾಗಿದೆ. 2023 ರಲ್ಲಿ ಫಾರ್ಮ್ ಹೌಸ್ ನ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು. ಅಲ್ಲದೇ ಈ ಮಹಿಳೆಯಿಂದ 3 ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ. ಸ್ಟೋರ್ ರೂಮಿನಲ್ಲಿ ಬಟ್ಟೆ, ಕೂದಲಿದ್ದ ಬ್ಯಾಗ್ ಅನ್ನು ಮಹಿಳೆ ಗುರುತಿಸಿಲ್ಲ. ಬ್ಯಾಟರಿ, ಪೇಂಟ್ ಇದ್ದ ರೂಮಿನಲ್ಲಿ ಮಹಿಳೆಯ ಉಡುಪು ಸಿಕ್ಕಿತೆಂದು ಹೇಳಿದ್ದಾರೆ.
ಇದನ್ನೂ ಓದಿ:-ಕೆಎಸ್‌ಓಯು | ಕುಲಪತಿ ಹಲಸೆ ಅಧಿಕಾರದ ಅವಧಿ ವಿಸ್ತರಣೆ
ಲಾಕ್ ಆಗಿದ್ದ ರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಕೂದಲನ್ನು ಸುತ್ತಿ ಬ್ಯಾಗ್ ನಲ್ಲಿ ಇಟ್ಟ ರಹಸ್ಯ ತಿಳಿಯುತ್ತಿಲ್ಲ. ಮಹಿಳೆಯ ಸಿಆರ್ ಪಿಸಿ 164 ಹೇಳಿಕೆಯನ್ನು ಕೋರ್ಟ್ ಗೆ ಹಾಜರುಪಡಿಸಿಲ್ಲ. ವಿಡಿಯೋ ಇತ್ತೆಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್‌ಎಸ್‌ಎಲ್ ವರದಿಯಲ್ಲೂ ವಿರೋಧಾಭಾಸಗಳಿವೆ. ಹೀಗಾಗಿ ಶಿಕ್ಷೆ ರದ್ದುಪಡಿಸುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…