ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.
ಈಗಾಗಲೇ ಮೇ ಮೊದಲ ವಾರದಲ್ಲಿ ಮೋದಿಗೆ ಒಂದು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೊಮ್ಮೆ ಪತ್ರ ಬರೆದು, ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸಿ ಆತನನ್ನು ದೇಶಕ್ಕೆ ಕರೆತರಲು ಸಹಕರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಜ್ವಲ್‌ನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದರೆ ಆತ ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯಯ್ಯ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೊಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿ ಮೂಲಕವು ಕ್ರಮಕೈಗೊಳ್ಳಬೇಕು. ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೀಗಾಗಲೇ ಮೇ ಮೊದಲ ವಾರದಲ್ಲಿ ಪ್ರಧಾನಿಗೆ ಬರೆದ ಪತ್ರದಲ್ಲಿ ಒತ್ತಾಹಿಸಿದ್ದರು. ಆದರೆ, ಈ ಪತ್ರಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ..
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…