ರಾಜ್ಯ

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 39 ಆರೋಪಿಗಳ ವಿರುದ್ಧ 13,712 ಪುಟಗಳ ವಿಶಾಲ ಚಾರ್ಜ್‌ಶೀಟ್ ಅನ್ನು ಸಲ್ಲಿಸಲಾಗಿದೆ.

ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರ ಹೆಸರು ಸೇರಿದೆ. ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಅವರನ್ನು ಎರಡನೇ ಆರೋಪಿ (ಎ2) ಎಂದು ಗುರುತಿಸಲಾಗಿದ್ದು, ನವೀನ್ ಅವರನ್ನು ಮೊದಲ ಆರೋಪಿ (ಎ1) ಎಂದು ತನಿಖಾ ತಂಡ ಹೆಸರಿಸಿದೆ.

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಪೆನ್‌ಡ್ರೈವ್ ಮೂಲಕ ಹಂಚಿಕೆಯಾದ ಈ ಘಟನೆಯು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ತಂಡವು ಸುದೀರ್ಘ ತನಿಖೆ ನಡೆಸಿ, ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಿ ಈ ಚಾರ್ಜ್‌ಶೀಟ್ ತಯಾರಿಸಿದ್ದು, ನ್ಯಾಯಾಲಯಕ್ಕೆ ಸಲ್ಲಿಸಿದೆ.

 

 

ಆಂದೋಲನ ಡೆಸ್ಕ್

Recent Posts

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

28 mins ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

1 hour ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

1 hour ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

3 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

4 hours ago