ರಾಜ್ಯ

ಪ್ರಜ್ವಲ್ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಮಾನವ ಕುಲ ತಲೆ ತಗ್ಗಿಸುವ ಕೆಲಸ: ಸಚಿವ ರಾಜಣ್ಣ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಅಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್ ರೇವಣ್ಣ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿರುವ ವಿಚಾರವಾಗಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಇದು ಬಹಳಷ್ಟು ವರ್ಷಗಳಿಂದ ನಡೆಯುತ್ತಾ ಬರುತ್ತಿದ್ದು ಈಗ ಸಂತ್ರಸ್ತೆಯರು ಧೈರ್ಯವಾಗಿ ಹೇಳಲು ಮುಂದೆ ಬರುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಈ ವಯಸ್ಸಲ್ಲಿ ಈ ರೀತಿಯ ಮಾನಸಿಕೆ ಹಿಂಸೆ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಸಂತ್ರಸ್ತರಿಗೆ ಆಚೆ ಬಂದು ಹೇಳಿಕೊಳ್ಳುವುದಕ್ಕೆ ಧೈರ್ಯ ಇರಲಿಲ್ಲ. ಈಗ ನಾನು ಉಸ್ತುವಾರಿ ಸಚಿವನಾದ ಮೇಲೆ ನಾನು ಧೈರ್ಯ ತುಂಬಿದ್ದೇನೆ. ನಿಮಗೆ ರಕ್ಷಣೆ ಕೊಡ್ತೀವಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಪ್ರಕ್ರಿಯೆ ವೇಳೆ ನಿಮ್ಮ‌ ಜೊತೆ ಇರುತ್ತೇವೆ ಎಂದಿದ್ದೇವೆ. ಈ ರೀತಿಯಾಗಿ ಧೈರ್ಯ ತುಂಬಿದ ಪರಿಣಾಮ‌ ಸಂತ್ರಸ್ತರು ಒಬ್ಬೊಬ್ಬರಾಗಿ ಆಚೆ ಬಂದು ಹೇಳುತ್ತಿದ್ದಾರೆ ಎಂದರು.

andolana

Recent Posts

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…

7 mins ago

ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…

16 mins ago

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…

37 mins ago

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…

58 mins ago

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…

1 hour ago

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…

1 hour ago