ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಾಗಿವೆ.
ಆರೋಪಿ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನಿರಾಕರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಹೀಗಾಗಿ ಪ್ರಜ್ವಲ್ ಈ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಸಿಐಟಿ ಠಾಣೆಯಲ್ಲಿ ದಾಖಲಾಗಿರುವ ಎರಡು ದೂರುಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಶೇಷ ನ್ಯಾಯಪೀಠದಲ್ಲಿ ಜುಲೈ 5 ಮಧ್ಯಾಹ್ನ 2:30 ಕ್ಕೆ ವಿಚಾರಣೆಗೆ ನಿಗದಿಯಾಗಿದೆ.





