ರಾಜ್ಯ

ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ಆರೋಪಿ ಪ್ರಜ್ವಲ್‌ ವಿರುದ್ಧ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಾಗಿವೆ.

ಆರೋಪಿ ಪ್ರಜ್ವಲ್‌ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನಿರಾಕರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಹೀಗಾಗಿ ಪ್ರಜ್ವಲ್‌ ಈ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದಾರೆ.

ಸಿಐಟಿ ಠಾಣೆಯಲ್ಲಿ ದಾಖಲಾಗಿರುವ ಎರಡು ದೂರುಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್‌ ಅವರ ವಿಶೇಷ ನ್ಯಾಯಪೀಠದಲ್ಲಿ ಜುಲೈ 5 ಮಧ್ಯಾಹ್ನ 2:30 ಕ್ಕೆ ವಿಚಾರಣೆಗೆ ನಿಗದಿಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

1 hour ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

1 hour ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

2 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago