ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.
ಎಸ್‌ಐಟಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ.ರವಿವರ್ಮ ಕುಮಾರ್ ಅವರು, ಮೇ.31ರಂದು ಪ್ರಜ್ವಲ್ ಬಂಧನದ ಹಿನ್ನೆಲೆ ಅರ್ಜಿಯು ಅನೂರ್ಜಿತಗೊಂಡಿದೆ ಎಂದು ಪ್ರಜ್ವಲ್ ಜೂನ್.12ರಂದು ವಿಚಾರಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿದ್ದಾರೆ. ಹೀಗಾಗಿ ಈಗ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಹೇಗೆ ಕೋರಲಾಗುತ್ತದೆ. ಅರ್ಜಿಯು ಊರ್ಜಿತವಾಗುವುದಿಲ್ಲ ಎಂದರು.
ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ನಾವೇ ನಿರ್ಧರಿಸಿದ್ದೇವೆ. ಇದನ್ನು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು. ಅದನ್ನು ಪರಿಶೀಲಿಸಿದ ಪೀಠವು ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.





