Mysore
32
scattered clouds

Social Media

ಭಾನುವಾರ, 31 ಮೇ 2026
Light
Dark

ಅತ್ಯಾಚಾರ ಆರೋಪ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಅತ್ಯಾಚಾರ ಆರೋಪ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಯ ವಾದ ಪ್ರತಿವಾದ ಮುಗಿದಿದೆ.

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಪ್ರಜ್ವಲ್‌ ರೇವಣ್ಣ ಪರ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದು, 3-4 ವರ್ಷಗಳ ಹಿಂದೆ ಅತ್ಯಾಚಾರ ನಡೆದಿದೆ  ಎನ್ನುವುದಾದರೆ ಆಗಲೇ ಯಾಕೆ ದೂರು ನೀಡಿರಲಿಲ್ಲ. ಈಗ ಯಾಕೆ ದೂರು ನೀಡಿದ್ದಾರೆ. ಇದು ರಾಜಕೀಯವಾಗಿ ಮುಗಿಸುವ ಯತ್ನ ಎಂದು ವಾದ ಮಂಡಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ್ದಾರೆ.

ಇನ್ನು ಕೆ.ಆರ್.ನಗರ ಸಂತ್ರಸ್ತೆ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಸೆಪ್ಟೆಂಬರ್.‌26ಕ್ಕೆ ಮುಂದೂಡಿಕೆ ಮಾಡಿದೆ.

 

 

Tags:
error: Content is protected !!