ಬೆಂಗಳೂರು: ಅತ್ಯಾಚಾರ ಆರೋಪ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಯ ವಾದ ಪ್ರತಿವಾದ ಮುಗಿದಿದೆ.
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಪ್ರಜ್ವಲ್ ರೇವಣ್ಣ ಪರ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದು, 3-4 ವರ್ಷಗಳ ಹಿಂದೆ ಅತ್ಯಾಚಾರ ನಡೆದಿದೆ ಎನ್ನುವುದಾದರೆ ಆಗಲೇ ಯಾಕೆ ದೂರು ನೀಡಿರಲಿಲ್ಲ. ಈಗ ಯಾಕೆ ದೂರು ನೀಡಿದ್ದಾರೆ. ಇದು ರಾಜಕೀಯವಾಗಿ ಮುಗಿಸುವ ಯತ್ನ ಎಂದು ವಾದ ಮಂಡಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ್ದಾರೆ.
ಇನ್ನು ಕೆ.ಆರ್.ನಗರ ಸಂತ್ರಸ್ತೆ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಸೆಪ್ಟೆಂಬರ್.26ಕ್ಕೆ ಮುಂದೂಡಿಕೆ ಮಾಡಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…