ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.5ಕ್ಕೆ ಮುಂದೂಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸೆಪ್ಟೆಂಬರ್.5ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.